Wednesday, June 24, 2026
Homeಕರಾವಳಿಡಾ. ಮೋಹನ್ ಆಳ್ವ ಅವರಿಗೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪ್ರದಾನ

ಡಾ. ಮೋಹನ್ ಆಳ್ವ ಅವರಿಗೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪ್ರದಾನ

- Advertisement -
- Advertisement -

ಹಾವೇರಿ: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ.‌ ಮೋಹನ್ ಆಳ್ವ ಅವರಿಗೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ 64ನೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗಂಗಮ್ಮ ಬೊಮ್ಮಾಯಿ‌ ಟ್ರಸ್ಟ್ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಶಿಗ್ಗಾಂವಿಯ ಸಂತೆ ಮೈದಾನದಲ್ಲಿ ಇಂದು ಸಂಜೆ ನಡೆದ ಸಮಾರಂಭದಲ್ಲಿ ಡಾ. ಮೋಹನ್ ಆಳ್ವ ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.

ಇದೇ ವೇಳೆ ಮಾಜಿ ರಾಜ್ಯಸಭಾ ಸದಸ್ಯ ಮತ್ತು ಕೆಎಲ್ಐ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೂ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಳಿಕ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

- Advertisement -

Latest News

error: Content is protected !!