Friday, May 17, 2024
Homeಕರಾವಳಿಉಡುಪಿಉಡುಪಿ: ಬಾಲ ಕಾರ್ಮಿಕ , ಕಿಶೋರ ಕಾರ್ಮಿಕ ಪದ್ಧತಿ ಕುರಿತು ಹೆಚ್ಚಿನ ಅರಿವು ಮೂಡಿಸಿ :...

ಉಡುಪಿ: ಬಾಲ ಕಾರ್ಮಿಕ , ಕಿಶೋರ ಕಾರ್ಮಿಕ ಪದ್ಧತಿ ಕುರಿತು ಹೆಚ್ಚಿನ ಅರಿವು ಮೂಡಿಸಿ : ಡಿ.ಸಿ

spot_img
- Advertisement -
- Advertisement -

ಉಡುಪಿ: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ . ಹೇಳಿದರು .

ಅವರು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ , ಜಿಲ್ಲಾಡಳಿತ , ಜಿಲ್ಲಾಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಯಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಆಟೋ ಪ್ರಚಾರದ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿನ ಪೋಷಕರಿಗೆ ಮನ ಮುಟ್ಟುವಂತೆ ಬೀದಿ ನಾಟಕಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು .

ಜಿಲ್ಲೆಯಾದ್ಯಂತ 10 ದಿನ ನಡೆಸಲಾಗುವ ಈ ಆಟೋ ಪ್ರಚಾರ ಕಾರ್ಯಕ್ರಮವು ಸಾಧ್ಯವಾದಷ್ಟು ಎಲ್ಲಾ ಕಾಲೋನಿಗಳಿಗೆ ತಲುಪುವಂತೆ ಯೋಜನೆ ರೂಪಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ . ನವೀನ್ ಭಟ್ , ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ.ಎಸ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಸ್ವಾಗತಿಸಿದರು.

- Advertisement -
spot_img

Latest News

error: Content is protected !!