- Advertisement -


- Advertisement -
ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಧ್ವಜಾರೋಹಣ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್ 24ರ ಸಂಜೆಯಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.
ನವೆಂಬರ್.25ರಂದು ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -


