Wednesday, May 1, 2024
Homeತಾಜಾ ಸುದ್ದಿಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವಕ್ಕೆ ಇಂದು ಚಾಲನೆ : ರಾಜ್ಯಾದ್ಯಂತ ಏಕಕಾಲಕ್ಕೆ ಮೊಳಗಲಿದೆ ಸ್ವಾತಂತ್ರ್ಯದ ಸ್ಮರಣೆ

ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವಕ್ಕೆ ಇಂದು ಚಾಲನೆ : ರಾಜ್ಯಾದ್ಯಂತ ಏಕಕಾಲಕ್ಕೆ ಮೊಳಗಲಿದೆ ಸ್ವಾತಂತ್ರ್ಯದ ಸ್ಮರಣೆ

spot_img
- Advertisement -
- Advertisement -

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ‌ಇಲಾಖೆ ಆಯೋಜಿಸಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮಕ್ಕೆ ಇಂದು ರಾಜ್ಯದ 75 ಸ್ಥಳಗಳಲ್ಲಿ ಏಕಕಾಲಕ್ಕೆ ಚಾಲನೆ ದೊರೆಯಲಿದೆ.

ಅಮೃತ ಭಾರತಿಗೆ ಕನ್ನಡದ ಆರತಿ ಎಂಬ ಘೋಷವಾಕ್ಯದೊಂದಿಗೆ ಮೂರು ಹಂತದಲ್ಲಿ ಮೂರು ತಿಂಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದರೆ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿದುರಾಶ್ವತ್ಥದಲ್ಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರದಲ್ಲಿ‌ ನಡೆಯುವ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ.ಸುನೀಲ್‌ ಕುಮಾರ್ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ ಹನ್ನೊಂದು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, ಹೋರಾಟ ನಡೆದ ವೀರ ಭೂಮಿಯಲ್ಲಿ ಶಿಲಾಫಲಕ ಅಳವಡಿಸಲಾಗುತ್ತದೆ.

ಯಾವುದೇ ಕಾರಣಕ್ಕೂ ಮೆರವಣಿಗೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ಕಟ್ಡುನಿಟ್ಟಿನ ಸೂಚನೆ ನೀಡಲಾಗಿದೆ.

ಆಗಸ್ಟ್‌ ಒಂಬತ್ತು, ಹತ್ತು ಮತ್ತು ಹನ್ನೊಂದರಂದು
ಅಮೃತ ಮಹೋತ್ಸವ ಅಭಿಯಾನದ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ.

- Advertisement -
spot_img

Latest News

error: Content is protected !!