- Advertisement -
- Advertisement -
ಬೆಂಗಳೂರು :ಇಂದು ನಡೆಯಲಿರುವಂತ ಸಚಿವ ಸಂಪುಟ ಸಭೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದ್ದು, ಮಹತ್ವದ ವಿಷಯಗಳ ಚರ್ಚೆ ನಡೆಯಲಿದೆ. ರಾಜ್ಯ ಡ್ರಗ್ಸ್ ಪ್ರಕರಣದ ಬಗ್ಗೆಯೂ ಮುಖ್ಯ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.
ಇಂದು ಬೆಳಿಗ್ಗೆ 11.30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದ ನರೆ, ಪ್ರವಾಹ ಪರಿಸ್ಥಿತಿ ನಿರ್ವಹಣೆ,ಕೊರೋನಾ ಪರಿಸ್ಥಿತಿ ಸೇರಿದಂತೆ ವಿವಿಧ ವಿಚಾರಗಳ ಕುರಿತಂತೆ ಚರ್ಚೆ ನಡೆಯಲಿದೆ. ಅಲ್ಲದೇ ಹಲವು ಮಹತ್ವದ ವಿಧೇಯಕಗಳಿಗೆ ಅಂಕಿತ ಮುದ್ರೆ ಬೀಳುವ ಸಂಭವವಿದೆ.
- Advertisement -