Wednesday, June 3, 2026
Homeತಾಜಾ ಸುದ್ದಿಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ ಕೆರೆಯಲ್ಲಿ ಮುಳುಗಿ ಸಾವು

ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ ಕೆರೆಯಲ್ಲಿ ಮುಳುಗಿ ಸಾವು

- Advertisement -
- Advertisement -

ರಾಮನಗರ: ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ನಡೆದಿದೆ.

ಪ್ರಸನ್ನ ಭಟ್ ಮೃತ ವ್ಯಕ್ತಿ. ನಿನ್ನೆ ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಮೃತ ಪ್ರಸನ್ನ ಭಟ್, ಮಾವತ್ತೂರು‌ ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ (26), ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದರು. ವಿಷಯ ತಿಳಿದು ಕನಕಪುರ ಗಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ‌ಪರೀಕ್ಷೆಗೆ ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಿದ್ದಾರೆ.

- Advertisement -

Latest News

error: Content is protected !!