Monday, April 29, 2024
Homeತಾಜಾ ಸುದ್ದಿಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟ : ಅಡ್ವಾಣಿ ಸೇರಿ 32 ಆರೋಪಿಗಳಿಗೆ ಕ್ಲೀನ್...

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟ : ಅಡ್ವಾಣಿ ಸೇರಿ 32 ಆರೋಪಿಗಳಿಗೆ ಕ್ಲೀನ್ ಚಿಟ್

spot_img
- Advertisement -
- Advertisement -

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕೇಸಿನಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲಾ 32 ಮಂದಿ ಆರೋಪಿಗಳಿಗೆ ಲಖನೌ ವಿಶೇಷ ಸಿಬಿಐ ನ್ಯಾಯಾಲಯ ಕ್ಲೀನ್ ಚಿಟ್ ಸಿಕ್ಕಿದೆ. ಈ ಮೂಲಕ 28 ವರ್ಷಗಳ ದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾತ್ವಿಕ ಅಂತ್ಯ ಸಿಕ್ಕಿದೆ

.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆ, ಮಸೀದಿ ಧ್ವಂಸ ಒಂದು ಪೂರ್ವ ನಿಯೋಜಿತ ಕೃತ್ಯವಲ್ಲ, ಉದ್ದೇಶಪೂರ್ವಕವಾಗಿ ಮಸೀದಿಯನ್ನು ಧ್ವಂಸ ಮಾಡಲಾಗಿದೆ ಎಂದು ಹೇಳಲು ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷಿಗಳಿಲ್ಲ ಎಂದು ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ತೀರ್ಪು ಪ್ರಕಟಿಸಿದ್ದಾರೆ.

ಈ ಮೂಲಕ 32 ಮಂದಿ ಆರೋಪಿಗಳಿಗೆ ಇಂದು ಕೋರ್ಟ್ ನಿಂದ ಸಿಕ್ಕಿದ ತೀರ್ಪು ಮಹತ್ವದ ಜಯ ಎನ್ನಬಹುದು. ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಕೇಂದ್ರದ ಸಚಿವರು ಬಿಜೆಪಿಯ ಭೀಷ್ಣ ಎಲ್ ಕೆ ಅಡ್ವಾಣಿ ನಿವಾಸಕ್ಕೆ ತೆರಳಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

- Advertisement -
spot_img

Latest News

error: Content is protected !!