Saturday, June 6, 2026
Homeಕರಾವಳಿಬೆಳ್ತಂಗಡಿ; 9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ

ಬೆಳ್ತಂಗಡಿ; 9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ

- Advertisement -
- Advertisement -

ಬೆಳ್ತಂಗಡಿ; 9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ.

ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ಜಯಶ್ರೀ (29) ಹಾಗೂ ಅವರ ಪುತ್ರಿ ರುಷಿಕಾ (9ತಿಂಗಳು) ನಾಪತ್ತೆಯಾದವರು.

ಮಾ.22ರಂದು ರಾತ್ರಿ ಜಯಶ್ರೀ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್ ನಲ್ಲಿ ಮಲಗಿದ್ದರು. ಮರುದಿನ ಬೆಳಿಗೆ ವೆಂಕಪ್ಪ ಗೌಡರು ಎದ್ದು ನೋಡಿದಾಗ ಮನೆಯಲ್ಲಿ ಪತ್ನಿ ಜಯಶ್ರೀ ಹಾಗೂ 9 ತಿಂಗಳ ಮಗು ರುಷಿಕಾ ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಬಗ್ಗೆ ವೆಂಕಪ್ಪ ಗೌಡ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!