Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡಿನಲ್ಲಿ ಶ್ವಾಸನಾಳದಲ್ಲಿ ಜೀರುಂಡೆ ಸಿಕ್ಕಿ ಹಾಕಿಕೊಂಡು ಮಗು ಸಾವು

ಕಾಸರಗೋಡಿನಲ್ಲಿ ಶ್ವಾಸನಾಳದಲ್ಲಿ ಜೀರುಂಡೆ ಸಿಕ್ಕಿ ಹಾಕಿಕೊಂಡು ಮಗು ಸಾವು

- Advertisement -
- Advertisement -

ಕಾಸರಗೋಡು: ಶ್ವಾಸನಾಳದಲ್ಲಿ ಜೀರುಂಡೆ ಸಿಲುಕಿ ಒಂದು ವರ್ಷದ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಇಲ್ಲಿನ  ನುಳ್ಳಿಪ್ಪಾಡಿ ಚೆನ್ನಿಕೆರೆಯ ಸತ್ಯೇ೦ದ್ರ- ರಂಜಿನಿ ದಂಪತಿ ಪುತ್ರ ಅನ್ವೇದ್ ಮೃತ ಮಗು.

ಮನೆಯಲ್ಲಿ ಆಟವಾಡುತ್ತಿದ್ದ ಮಗು ಪ್ರಜ್ಞೆ ತಪ್ಪಿ ಬಿದ್ದಿದ್ದು ಕೂಡಲೇ ಮನೆಯವರು ಆಸ್ಪತ್ರೆಗೆ ತಲಪಿಸಿದರೂ ಮಗು ಮೃತ ಪಟ್ಟಿತ್ತು. ತಪಾಸಣೆಯಿಂದ ಮಗುವಿನ ಸಾವಿಗೆ ಕಾರಣ ತಿಳಿದು ಬಂದಿರಲಿಲ್ಲ. ಇದರಿಂದ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶ್ವಾಸನಾಳದಲ್ಲಿ ಸಣ್ಣ ಜೀರುಂಡೆ ಮರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ಜೀರುಂಡೆ ಮರಿಯನ್ನು ನುಂಗಿರಬಹುದು ಎಂದು ಶಂಕಿಸಲಾಗಿದ್ದು, ಇದರಿಂದಲೇ ಮಗು ಉಸಿರುಗಟ್ಟಿ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಮಗು ಒಮ್ಮೆಲೇ ಕುಸಿದು ಬಿದ್ದುದ್ದನ್ನು ಕಂಡು ಗಾಬರಿಗೊಂಡ ಮನೆಯವರು ಬೊಬ್ಬೆ ಹಾಕಿದಾಗ ಸ್ಥಳೀಯರು ಆಗಮಿಸಿ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಷ್ಟರಲ್ಲಾಗಲೇ ಮಗು ಮೃತಪಟ್ಟಿತ್ತು ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!