Tuesday, May 7, 2024
Homeಕರಾವಳಿಬೆಳ್ತಂಗಡಿ : ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಮಗು ಸಾವು ಆರೋಪ;ಆಸ್ಪತ್ರೆಗೆ ದೌಡಾಯಿಸಿ ಆಸ್ಪತ್ರೆಯ...

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಮಗು ಸಾವು ಆರೋಪ;ಆಸ್ಪತ್ರೆಗೆ ದೌಡಾಯಿಸಿ ಆಸ್ಪತ್ರೆಯ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

spot_img
- Advertisement -
- Advertisement -

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಗಳ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ ಎಂಬ ಆರೋಪ  ಕೇಳಿ ಬಂದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಸಾವನ್ನಪ್ಪಿದ ಕಂದಮ್ಮ.

 ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಮಗುವಿನ ತಂದೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲು ಸಲಹೆ ನೀಡಿದ್ದಾರೆ.

 ನೆರಿಯದ ತನ್ನ  ಅಕ್ಕ ಲೀಲಾವತಿ ಅವರ ಮನೆಯಲ್ಲಿದ್ದಕೊಂಡು ಮಗುವನ್ನು ಆರೈಕೆ ಮಾಡಿಕೊಂಡಿದ್ದ ಸವಿತಾ ಆಗಸ್ಟ್ 8 ರಂದು(ಇಂದು) ಕಫ ಅಗಿತ್ತು ಎಂದು ಮಧ್ಯಾಹ್ನ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡಿದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಮಂದಿ ಆರೋಪ ಮಾಡುತ್ತಿದ್ದಾರೆ.

- Advertisement -
spot_img

Latest News

error: Content is protected !!