Thursday, June 4, 2026
Homeಕರಾವಳಿಮಂಗಳೂರುಮಂಗಳೂರು; ರೈಮ್ಸ್ ಹೇಳೋದರಲ್ಲಿ ಲಿಮ್ಕಾ ಬುಕ್ ಆಪ್ ರೆಕಾರ್ಡ್ ದಾಖಲೆ ಮಾಡಿದ್ದ ಬೇಬಿ ಪೂರ್ವಿ ವಿಧಿವಶ

ಮಂಗಳೂರು; ರೈಮ್ಸ್ ಹೇಳೋದರಲ್ಲಿ ಲಿಮ್ಕಾ ಬುಕ್ ಆಪ್ ರೆಕಾರ್ಡ್ ದಾಖಲೆ ಮಾಡಿದ್ದ ಬೇಬಿ ಪೂರ್ವಿ ವಿಧಿವಶ

- Advertisement -
- Advertisement -

ಮಂಗಳೂರು; ರೈಮ್ಸ್ ಹೇಳೋದರಲ್ಲಿ ಲಿಮ್ಕಾ ಬುಕ್ ಆಪ್ ರೆಕಾರ್ಡ್ ದಾಖಲೆ ಮಾಡಿದ್ದ ಬೇಬಿ ಪೂರ್ವಿ (7) ವಿಧಿವಶರಾಗಿದ್ದಾರೆ.

ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌ ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ ಪೂರ್ವಿ 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ ಇಂಡಿಯನ್‌ ಬುಕ್‌ ಆಫ್‌ ರೆಕಾರ್ಡ್ಸ್ ನಲ್ಲಿ ದಾಖಲಿಸಿದ್ದರು. ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್‌, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದರು. ವಿವಿಧ ಸಂಘ ಸಂಸ್ಥೆಯಿಂದ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದರು.

ಅನಾರೋಗ್ಯದ ಹಿನ್ನೆಲೆ ಪೂರ್ವಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!