Saturday, April 27, 2024
Homeಕರಾವಳಿನಾಳೆ ಅಮಿತ್ ಶಾ ಭೇಟಿ ಹಿನ್ನೆಲೆ ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ;...

ನಾಳೆ ಅಮಿತ್ ಶಾ ಭೇಟಿ ಹಿನ್ನೆಲೆ ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ; ಆತಂಕದಲ್ಲಿ ಪದವಿ ವಿದ್ಯಾರ್ಥಿಗಳು

spot_img
- Advertisement -
- Advertisement -

ಪುತ್ತೂರು; ನಾಳೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು ಪುತ್ತೂರಿಗೆ ಆಗಮಿಸುತ್ತಿದ್ದು, ಇದರಿಂದಾಗಿ ಕೆಎಸ್ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ್ತೊಂದೆಡೆ ಮಂಗಳೂರು ವಿವಿ ಪದವಿ ಪರೀಕ್ಷೆ ನಡೆಯಲಿದ್ದು ಆ ವಿದ್ಯಾರ್ಥಿಗಳಲ್ಲಿ ಆತಂಕ ಶುರುವಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲು ಕಾರ್ಯಕ್ರಮದ ಸಂಯೋಜಕರಿಂದ ಬೇಡಿಕೆ ಬಂದಿದೆ. ಅದರಂತೆ ಪುತ್ತೂರು ವಿಭಾಗದಿಂದ ಸದರಿ ಕಾರ್ಯಕ್ರಮದ ಪ್ರಯುಕ್ತ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಆದ್ದರಿಂದ ಫೆ.11ರಂದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ಹಾಗೂ ಮಡಿಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುತ್ತದೆ ಎಂದು ಪುತ್ತೂರು ವಿಭಾಗದ ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಮಂಗಳೂರು ವಿ.ವಿ ಯ ಪದವಿ ತರಗತಿಗಳ‌ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಬಸ್ ವ್ಯತ್ಯಯದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಫೆ.11ರಂದು ಕೂಡ ಪರೀಕ್ಷೆ ನಡೆಯಲಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳಲು ಸರ್ಕಾರಿ ಬಸ್ ಗಳನ್ನು ಬಳಸುವ ಕಾರಣ ಈ ರೀತಿ ಬಸ್ ಸಂಚಾರದಲ್ಲಿ ವ್ಯತ್ಯಯ ಮಾಡಿದರೆ ಪರೀಕ್ಷೆ ಸಮಯಕ್ಕೆ ಸರಿಯಾಗಿ ಎಂಬ ಆತಂಕದಲ್ಲಿದ್ದಾರೆ.

- Advertisement -
spot_img

Latest News

error: Content is protected !!