Tuesday, May 7, 2024
Homeಕರಾವಳಿಮಂಗಳೂರು: ಬೇಡಿಕೆ ಈಡೇರಿಸದಿದ್ದರೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡ್ತೇವೆ: ಪ್ರತಿ ಕ್ಷೇತ್ರದಲ್ಲೂ ಓರ್ವ ಬಂಟ ಅಭ್ಯರ್ಥಿಯನ್ನು...

ಮಂಗಳೂರು: ಬೇಡಿಕೆ ಈಡೇರಿಸದಿದ್ದರೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡ್ತೇವೆ: ಪ್ರತಿ ಕ್ಷೇತ್ರದಲ್ಲೂ ಓರ್ವ ಬಂಟ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ – ಐಕಳ ಹರೀಶ್ ಶೆಟ್ಟಿ

spot_img
- Advertisement -
- Advertisement -

ಮಂಗಳೂರು : ಬಂಟ ಸಮಾಜಕ್ಕೆ ಪ್ರತ್ಯೇಕ ನಿಗಮ, ಹಿಂದುಳಿದ ವರ್ಗದ ಮೀಸಲಾತಿ 3ಬಿಯಿಂದ 2ಎಗೆ ವರ್ಗಾಯಿಸುವ ಎರಡು ಬೇಡಿಕೆಗಳನ್ನು ಈಡೇರಿಸದಿದ್ದರೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡ್ತೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಗರದ ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ ಸಮುದಾಯಕ್ಕೆ ನಿಗಮ ಇಲ್ಲ. ಬಿಜೆಪಿ ಸರಕಾರಕ್ಕೆ ಬದ್ಧತೆ ಇದ್ದರೆ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು. ಬಂಟರ ಸಂಘದಲ್ಲೂ ಶೇ.75ರಷ್ಟು ಮಂದಿ ಮಧ್ಯಮ ವರ್ಗ ಮತ್ತು ಬಡತನ ರೇಖೆ ಕೆಳಗೆ ಜೀವನ ಸಾಗಿಸುತ್ತಿದ್ದಾರೆ. ಆದ್ರೆ ಇದುವರೆಗೂ ನಮಗೆ ಮೀಸಲಾತಿ ಸಿಕ್ಕಿಲ್ಲ. ಬಂಟ ಸಮುದಾಯದ ಶಾಸಕರೂ ಈ ಬಗ್ಗೆ ಧ್ವನಿಯೆತ್ತಿಲ್ಲ ಎಂದರು. ಪ್ರತೀ ಕ್ಷೇತ್ರದಲ್ಲೂ ಓರ್ವ ಬಂಟ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ.  ಐದು ಸಾವಿರ ಮತಗಳನ್ನು ಪಡೆದರೂ ಗೆಲ್ಲುವ ಅಭ್ಯರ್ಥಿಯನ್ನು ಸೋಲಿಸುವ ಸಾಮರ್ಥ್ಯ ನಮಗಿದೆ ಎಂದು ಎಚ್ಚರಿಸಿದರು.

ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ಳೂರು ಮೋಹನ್ ದಾಸ್ ಶೆಟ್ಟಿ, ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಜತೆ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ, ಕರಾವಳಿ ಭಾಗದ ವಿವಿಧ ಕ್ಷೇತ್ರಗಳ ಬಂಟರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.

- Advertisement -
spot_img

Latest News

error: Content is protected !!