Monday, May 6, 2024
Homeಉದ್ಯಮಕಾನೂನು ಹೋರಾಟದಲ್ಲಿ ಹಿನ್ನಡೆ :ವಿಜಯ್ ಮಲ್ಯ ಭಾರತಕ್ಕೆ ಮರಳುವುದು ಸನ್ನಿಹಿತ

ಕಾನೂನು ಹೋರಾಟದಲ್ಲಿ ಹಿನ್ನಡೆ :ವಿಜಯ್ ಮಲ್ಯ ಭಾರತಕ್ಕೆ ಮರಳುವುದು ಸನ್ನಿಹಿತ

spot_img
- Advertisement -
- Advertisement -

ಲಂಡನ್ : ಬಹಳ ಸಮಯಗಳಿಂದ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯಗೆ ಬ್ರಿಟನ್ ನಲ್ಲಿ ಕಾನೂನು ಹೋರಾಟದಲ್ಲಿ ಭಾರೀ ಹಿನ್ನಡೆಯಾಗಿದೆ. ಭಾರತಕ್ಕೆ ಹಸ್ತಾಂತರಿಸುವ ಕುರಿತು ಲಂಡನ್ ಹೈ ಕೋರ್ಟ್ ನೀಡಿದ್ದ ತೀರ್ಪನ್ನು ಅಲ್ಲಿನ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಅನುಮತಿ ಕೋರಿ ಬ್ರಿಟಿಷ್ ಆಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಿದೆ.


ದೇಶದ ವಿವಿಧ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರುಪಾಯಿ ಸಾಲ ಪಡೆದು ವಂಚಿಸಿ ಬಂಧನ ಭೀತಿಯಿಂದ ರಾತ್ರೋ ರಾತ್ರಿ ಲಂಡನ್‌ಗೆ ಪಲಾಯನಗೊಂಡಿದ್ದ ಮದ್ಯದ ದೊರೆ ವಿಜಯ್ ಮಲ್ಯ ಕಾನೂನು ಹೋರಾಟ ಕೊನೆಗಾಣುವ ಎಲ್ಲಾ ಲಕ್ಷಣಗಳು ಕಂಡುಬಂದಿದೆ. ಭಾರತಕ್ಕೆ ಹಸ್ತಾಂತರಕ್ಕೆ ಕುರಿತಾದ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಗೃಹ ಸಚಿವೆ ಪ್ರೀತಿ ಪಟೇಲ್‌ ಅವರ ಮುಂದಿನ ಆದೇಶದ ಅನುಸಾರ 28 ದಿನದೊಳಗೆ ಭಾರತಕ್ಕೆ ಹಸ್ತಾಂತರಗೊಳ್ಳುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.

ವೆಸ್ಟ್‌ಮಿನಿಸ್ಟರ್‌ ಮ್ಯಾಜಿಸ್ಪ್ರೇಟ್‌ ಕೋರ್ಟ್‌ ನೀಡಿದ್ದ ಹಸ್ತಾಂತರ ಆದೇಶ ಪ್ರಶ್ನಿಸಿ ಮಲ್ಯ ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿಯನ್ನು ಏ. 20ರಂದು ಕೋರ್ಟ್‌ ವಜಾಗೊಳಿಸಿತ್ತು. ಇದಾದ ನಂತರ ಅವರಿಗೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲು 14 ದಿನಗಳ ಕಾಲಾವಕಾಶ ನೀಡಲಾಗಿತ್ತು. ಮಲ್ಯ ಅವರು ಈ ಕಾನೂನು ಹೋರಾಟದಲ್ಲಿ ಹಿನ್ನಡೆ ಅನುಭವಿಸಿದ್ದರಿಂದ ಈಗ ಭಾರತಕ್ಕೆ ಮರಳುವುದು ಅನಿವಾರ್ಯವಾಗಿದೆ.

- Advertisement -
spot_img

Latest News

error: Content is protected !!