Saturday, May 4, 2024
Homeಕರಾವಳಿಪುತ್ತೂರು; ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಮನೆಯಲ್ಲಿ ದರೋಡೆ ಪ್ರಕರಣ;ಆರು ಮಂದಿ...

ಪುತ್ತೂರು; ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಮನೆಯಲ್ಲಿ ದರೋಡೆ ಪ್ರಕರಣ;ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಪುತ್ತೂರು; ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್ ,ವಸಂತ ,ಫಸಲ್, ನಿಝಾರ್ ಬಂಧಿತ ಆರೋಪಿಗಳು. ಬಂಧಿತರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳು ಎನ್ನಲಾಗಿದೆ.

ಐವರು ದರೋಡೆಕೋರರ ತಂಡ ಸೆಪ್ಟೆಂಬರ್ 6ರಂದು ತಡರಾತ್ರಿ ಗುರುಪ್ರಸಾದ್ ರೈಯವರ ಮನೆಯ ಹಿಂಬದಿ ಬಾಗಿಲು ಮುರಿದು ಒಳನುಗ್ಗಿ ದರೋಡೆ ಮಾಡಿತ್ತು.ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈಯವರನ್ನು ಹಗ್ಗ ಮತ್ತು ಬಟ್ಟೆಯಿಂದ ಕಟ್ಟಿ ಬಾಯಿಯನ್ನು ಬಿಗಿದು ಕತ್ತಿನ ಭಾಗಕ್ಕೆ ಮಾರಕಾಸ್ತ್ರಗಳನ್ನು ಇಟ್ಟು ಬೆದರಿಸಿ 30 ಸಾವಿರ ರೂ.ನಗದು ಮತ್ತು ಚಿನ್ನಾಭರಣವನ್ನು ದರೋಡೆ ಮಾಡಿತ್ತು. ಕಸ್ತೂರಿ ರೈಯವರನ್ನು ಬೆದರಿಸಿ ಅವರ ಕೈಯಿಂದಲೇ ಬೀಗದ ಕೀ ಪಡೆದುಕೊಂಡು ಕಪಾಟಿನಲ್ಲಿದ್ದ ಚಿನ್ನಾಭರಣವನ್ನು ದೋಚಿ ತಂಡ ಪರಾರಿಯಾಗಿತ್ತು.

ಈ ಪ್ರಕರಣದ ಪ್ರಮುಖ ಆರೋಪಿ ಕಾಞಂಗಾಡಿನ ನಿವಾಸಿ ಸನಲ್‌ ತಲೆಮರೆಸಿಕೊಂಡಿದ್ದಾನೆ. ಈತ ದರೋಡೆ ಮತ್ತು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು, ಈತನ ಮೇಲೆ 14 ಪ್ರಕರಣಗಳು ದಾಖಲಾಗಿವೆ.ಫೈಝಲ್‌ ಮತ್ತು ಅಬ್ದುಲ್ ನಿಸಾರ್‌ ನಿಡ್ಪಳ್ಳಿಯಲ್ಲಿ ಮಹಿಳೆಯ ಕರಿಮಣಿ ಎಳೆದ ಪ್ರಕರಣ ಮತ್ತು ಕುದ್ದುಪದವಿನ SR ಪೆಟ್ರೋಲ್‌ ಬಂಕ್‌ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ವರ್ಷಗಳ ಹಿಂದೆ ಗುರುಪ್ರಸಾದ್ ರೈಯವರ ಮನೆಗೆ ವಾಹನವೊಂದರಲ್ಲಿ ಚಾಲಕನಾಗಿ ಬಂದಿದ್ದ ಸುಧೀರ್ ಪೆರುವಾಯಿ ಮನೆಯ ವಿಷಯವನ್ನು ತಿಳಿದುಕೊಂಡು ದರೋಡೆ ತಂಡಕ್ಕೆ ಮಾಹಿತಿ ನೀಡಿ ಬಳಿಕ ಆತನೂ ಸೇರಿ ತಂಡ ಈ ಕೃತ್ಯ ಎಸಗಿದೆ. ಸೆ.6ರಂದು ರಾತ್ರಿ ಕುದ್ಕಾಡಿ ಮನೆಯಲ್ಲಿ ದರೋಡೆ ನಡೆದಿತ್ತು. ಕೃತ್ಯ ಎಸಗುವ ಮೊದಲ ದಿನ ರಾತ್ರಿ ತಂಡವೊಂದು ರಾತ್ರಿ ವೇಳೆ ಗುರುಪ್ರಸಾದ್ ರೈಯವರ ಮನೆಯ ಬಳಿ ಬಂದು ಬಾಗಿಲು ಬಡಿದು ಹೋಗಿದ್ದರು.

ಐವರು ದರೋಡೆಕೋರರ ತಂಡ ನ.6ರಂದು ತಡರಾತ್ರಿ ಮನೆಯ ಹಿಂಬದಿ ಬಾಗಿಲು ಮುರಿದು ಒಳನುಗ್ಗಿ ದರೋಡೆ ಮಾಡಿದ್ದರು. ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈಯವರನ್ನು ಹಗ್ಗ ಮತ್ತು ಬಟ್ಟೆಯಿಂದ ಕಟ್ಟಿ ಬಾಯಿಯನ್ನು ಬಿಗಿದು ಕತ್ತಿನ ಭಾಗಕ್ಕೆ ಮಾರಕಾಸ್ತ್ರಗಳನ್ನು ಇಟ್ಟು ಬೆದರಿಸಿ 30 ಸಾವಿರ ರೂ.ನಗದು ಮತ್ತು ಸುಮಾರು 15 ಪವನ್. ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಕಸ್ತೂರಿ ರೈಯವರನ್ನು ಬೆದರಿಸಿ ಅವರ ಕೈಯಿಂದಲೇ ಬೀಗದ ಕೀ ಪಡೆದುಕೊಂಡು ಕಪಾಟಿನಲ್ಲಿದ್ದ ಚಿನ್ನಾಭರಣವನ್ನು ದೋಚಿ ತಂಡ ಪರಾರಿಯಾಗಿದ್ದರು. ಹೋಗುವಾಗ ಗುರುಪ್ರಸಾದ್ ರ ಮತ್ತವರ ತಾಯಿಯ ಕಾಲು ಮುಟ್ಟಿ ನಮಸ್ಕರಿಸಿ, ಕಸ್ತೂರಿ ರೈಯವರಿಗೆ ಕುಡಿಯಲು ನೀರು ಕೊಟ್ಟು ಹೋಗಿದ್ದು, ಈ ಮನೆಯ ಋಣ ಹೊಂದಿರುವವರೇ ಯಾರೋ ಕೃತ್ಯ ಎಸಗಿದ್ದಾರೆ ಎನ್ನುವ ಸಂಶಯಕ್ಕೆ ಕಾರಣವಾಗಿತ್ತು.

ಎಸ್ಪಿ ಸಿ.ಬಿ ರಿಷ್ಯಂತ್ ನಿರ್ದೇಶನದಲ್ಲಿ ಡಿವೈಎಸ್‌ಪಿ ಗಾನ ಪಿ ಕುಮಾರ್‌ ನೇತೃತ್ವದಲ್ಲಿ ನಾಲ್ಕು ತಂಡ ರಚಿಸಿ ಸಿನಿಮೀಯ ರೀತಿಯಲ್ಲಿ ಪ್ರಕರಣ ಭೇದಿಸುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ. ಇನ್ಸ್‌ಪೆಕ್ಟರ್‌ ರವಿ ಬಿ.ಎಸ್‌, ಸಬ್‌ಇನ್ಸ್‌ಪೆಕ್ಟರ್‌ ಉದಯ ರವಿ, ಧನಂಜಯ, ರುಕ್ಮಯ್ಯ ಅವರು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!