ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಬಾಗಪ್ಪ ಹರಿಜನ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧೆಡೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.
ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ.
ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ 8-50 ಸುಮಾರಿಗೆ ಮನೆಯಿಂದ ಹೊರ ಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನಾ ಸ್ಥಳಕ್ಕೆ SP ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಪತ್ತೆಗಾಗಿ ASP ರಾಮನಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.ಈ ಹಿಂದೆ 2023 ರಲ್ಲಿ ಕೋರ್ಟ್ ಆವರಣದಲ್ಲಿ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.