- Advertisement -


- Advertisement -
ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವನ್ನು ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಗಟ್ಟಿ, ಪತ್ನಿ-ಮಗನನ್ನು ಅಪಹರಿಸಿ 180 ಗ್ರಾಂ ಚಿನ್ನಾಭರಣ ಹಾಗೂ ₹ 3 ಲಕ್ಷ ನಗದು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಮಡಿಕೇರಿ ಮೂಲದ ಉಬೇದ್ ಹಾಗೂ ಜಿಯಾದ್ ಬಂಧಿತ ಆರೋಪಿಗಳಾಗಿದ್ದು, ಕೊಡಗಿನಲ್ಲಿ ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲಾಗಿದೆ.
ಜೂನ್ 29ರಂದು ನಡೆದಿದ್ದ ಈ ಕೃತ್ಯದಲ್ಲಿ ಒಟ್ಟು 16 ಮಂದಿ ಭಾಗಿಯಾಗಿದ್ದು, ಈಗಾಗಲೇ 5 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಪ್ರಕರಣದ ಮುಖ್ಯ ಆರೋಪಿ ಶಿಜಿನ್ ತಲೆಮರೆಸಿಕೊಂಡಿದ್ದು, ಮತ್ತೊಬ್ಬ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ. ಅವರಿಗಾಗಿ ಪಣಂಬೂರು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
- Advertisement -


