Friday, June 5, 2026
HomeUncategorizedಪುತ್ತೂರು; ಕಲ್ಲೇಗ ಟೈಗರ್ಸ್‌ ನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿ...

ಪುತ್ತೂರು; ಕಲ್ಲೇಗ ಟೈಗರ್ಸ್‌ ನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

- Advertisement -
- Advertisement -

ಪುತ್ತೂರು; ಕಲ್ಲೇಗ ಟೈಗರ್ಸ್‌ ನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ  ಆರೋಪಿಗಳಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

ಆರೋಪಿಗಳಾದ ಚೇತನ್ ಮತ್ತು ಮನೀಷ್ ಜಾಮೀನು ಕೋರಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ನೇಮಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಮಹೇಶ್ ಕಜೆ ಅವರು, ‘ಘಟನೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಈಗಾಗಲೇ ಸುಮಾರು 55 ಸಾಕ್ಷ್ಯ ಸಂಗ್ರಹಿಸಿದ್ದು, ಇದೊಂದು ಗಂಭೀರ ಪ್ರಕರಣವಾಗಿದೆ. ಪ್ರಮುಖ ಸಾಕ್ಷಿಗಳ ವಿಚಾರಣೆಗೆ ಮೊದಲೇ ಆರೋಪಿಗಳನ್ನು ಬಿಡುಗಡೆ ಮಾಡಬಾರದು’ ಎಂದು ವಾದ ಮಂಡಿಸಿದ್ದರು. ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಚೇತನ್, ಮನೀಷ್ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣದ ಉಳಿದ ಇಬ್ಬರು ಆರೋಪಿಗಳಾದ ಮಂಜುನಾಥ್ ಯಾನೆ ಹರಿ, ಕೇಶವ ಪಡೀಲ್ ಅವರು ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಈ ಹಿಂದೆಯೇ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿತ್ತು. ಆ ಬಳಿಕ ಅವರು ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯೂ ವಜಾಗೊಂಡಿತ್ತು.

2023ರ ನ.6ರಂದು ರಾತ್ರಿ ನಡೆದಿದ್ದ ಅಕ್ಷಯ್ ಕಲ್ಲೇಗ (24) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಷಯ್ ಅವರ ಸ್ನೇಹಿತ ಚಿಕ್ಕಮೂಡ್ನೂರಿನ ವಿಖ್ಯಾತ್ ಬಿ. ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿ ಚೇತನ್, ಪಡೀಲು ನಿವಾಸಿ ಮನೀಷ್, ಬನ್ನೂರು ನಿವಾಸಿ ಮಂಜುನಾಥ್ ಯಾನೆ ಹರಿ, ಬ್ಲಾಕ್ ಕಾಂಗ್ರೆಸ್‌ ಎಸ್‌ಸಿ ಘಟಕದ ಅಧ್ಯಕ್ಷರಾಗಿದ್ದ ಪಡೀಲು ನಿವಾಸಿ ಕೇಶವ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

- Advertisement -

Latest News

error: Content is protected !!