Saturday, June 6, 2026
Homeತಾಜಾ ಸುದ್ದಿಮಾರ್ಚ್ .10ಕ್ಕೆ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ

ಮಾರ್ಚ್ .10ಕ್ಕೆ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ ಮಾರ್ಚ್ 10 ರಂದು ನಡೆಯುವ ಸಾಧ್ಯತೆ ಇದೆ.

ಕಳೆದ ಭಾನುವಾರ ರಾತ್ರಿ ದೆಹಲಿ ಮದ್ಯ ನೀತಿ ಹಗರಣದಲ್ಲಿ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (CBI) ಬಂಧಿಸಿತ್ತು.

ಇನ್ನು ಸಿಸೋಡಿಯಾ ಅವರು ಶುಕ್ರವಾರ ಜಾಮೀನು ಕೋರಿ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಜಾರಿ ನಿರ್ದೇಶನಾಲಯ (ED) ಮೂಲಗಳು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಲು ಕಾನೂನು ಜಾರಿ ಸಂಸ್ಥೆ ಕೋರುವ ಸಾಧ್ಯತೆಯಿದೆ ಎಂದು ಹೇಳಿದ್ದು, ಪ್ರಕರಣದ ಇತರ ಶಂಕಿತರೊಂದಿಗೆ ಸಿಸೋಡಿಯಾ ಅವರನ್ನು ವಿಚಾರಣೆ ನಡೆಸಲು ಕಾಲಾವಕಾಶ ಕೇಳಲಿದೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!