- Advertisement -
- Advertisement -
ಮಂಗಳೂರು: ಕುಡುಪುವಿನಲ್ಲಿ ನಡೆದ ಮುಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತವಾಗಿದೆ.
ಏ. 27ರಂದು ನಡೆದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣದ 2ನೇ ಆರೋಪಿ ದೇವದಾಸ್ ಮತ್ತು 5ನೇ ಆರೋಪಿ ದೀಕ್ಷಿತ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರಿನ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ.
ಪ್ರಕರಣದ 1ನೇ ಆರೋಪಿ ಸಚಿನ್ ಟಿ, 3ನೇ ಆರೋಪಿ ಮಂಜುನಾಥ್ ಮತ್ತು 4ನೇ ಆರೋಪಿ ನಟೇಶ್ ಎಂಬವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜೂ.30ರಂದು ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು.
- Advertisement -