Thursday, June 25, 2026
Homeಪ್ರಮುಖ-ಸುದ್ದಿಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ‌ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

ಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ‌ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

- Advertisement -
- Advertisement -

ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ‌ ರೀತಿಯಲ್ಲಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರ್ ಎಸ್ ಎಸ್ ಮುಖಂಡ ಡಾ‌. ಕಲ್ಲಡ್ಕ ಪ್ರಭಾಕರ್ ಭಟ್‌‌ ಅವರಿಗೆ ಜಾಮೀನು ಮಂಜೂರಾಗಿದೆ.

ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದು,ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ ಐಆರ್ ದಾಖಲಾಗಿತ್ತು.‌

ಹೋರಾಟಗಾರ್ತಿ ನಜ್ಮಾ ನಜೀರ್ ಎಂಬವರು ನೀಡಿದ್ದ ದೂರಿನ ಅನ್ವಯ ಪೊಲೀಸರು ‌ಪ್ರಕರಣ‌ ದಾಖಲಿಸಿಕೊಂಡಿದ್ದರು.ಡಿಸೆಂಬರ್ 24 ರಂದು ನಡೆದಿದ್ದ ಸಂಕೀರ್ತನಾ ಯಾತ್ರೆ ವೇಳೆ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಮುಸ್ಲಿಮರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂಪಾಯಿ ಮೌಲ್ಯ ಬಾಂಡ್ ಮೇಲೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ವಕೀಲ ಚಂದ್ರೇಗೌಡ ವಾದ ಮಂಡನೆ‌‌‌‌ ಮಾಡಿದ್ದರು.

- Advertisement -

Latest News

error: Content is protected !!