Thursday, June 4, 2026
Homeಕರಾವಳಿತುಮಕೂರಿನಲ್ಲಿ ಪೊಲೀಸ್ ವಶಕ್ಕೆ ಪಡೆಯಲ್ಪಟ್ಟಿದ್ದ ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ ಬಿಡುಗಡೆ

ತುಮಕೂರಿನಲ್ಲಿ ಪೊಲೀಸ್ ವಶಕ್ಕೆ ಪಡೆಯಲ್ಪಟ್ಟಿದ್ದ ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ ಬಿಡುಗಡೆ

- Advertisement -
- Advertisement -

ತುಮಕೂರು: ಕುಣಿಗಲ್ ನಲ್ಲಿ ಪೊಲೀಸ್ ವಶಕ್ಕೊಳಪಟ್ಟಿದ್ದ ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.

ತುಮಕೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕುಣಿಗಲ್ ನಲ್ಲಿ ಇಂದು ಬೆಳಗ್ಗೆ ತಡೆಹಿಡಿದಿದ್ದ ಪೊಲೀಸರು ವಶಕ್ಕೆ ಪಡೆದಿದ್ದರು.

ಪ್ರಚೋದನಾತ್ಮಾಕ ಭಾಷಣ ಎಂಬ ಆರೋಪದಡಿ ಮುಂಜಾಗ್ರತಾ ಕ್ರಮವಾಗಿ ಕುಣಿಗಲ್ ಬಳಿ ಪೊಲೀಸರು ಮುರಳಿಕೃಷ್ಣ ಹಸಂತಡ್ಕ ಅವರನ್ನು ವಶಕ್ಕೆ ಪಡೆದಿದ್ದರು.

ಮುರಳಿಕೃಷ್ಣ ಅವರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಮತ್ತು ತುಮಕೂರು ಜಿಲ್ಲಾಧ್ಯಕ್ಷ ರವಿಶಂಕರ್ ತುಮಕೂರು ಡಿಸಿ ಮತ್ತು ಎಸ್ಪಿ ಅವರನ್ನು ಭೇಟಿ ಮಾಡಿದ್ದರು.

ಅಲ್ಲದೇ ಮುರಳಿಕೃಷ್ಣ ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕೂಡಾ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

Latest News

error: Content is protected !!