- Advertisement -
- Advertisement -
ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.ಬಜಪೆಯ ತಾರೀಕಂಬ್ಳ ನಿವಾಸಿ ವಿನ್ಸೆಂಟ್ ಡಿ”ಸೋಜಾ (34) ಬಂಧಿತ ಆರೋಪಿ.
ಸೆಪ್ಟೆಂಬರ್ 1 ರಂದು ಮಂಗಳೂರಿನ ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ರಸ್ತೆಯ ಕರೋಡಿ ಎಂಬಲ್ಲಿರುವ ಮನೆಯ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಮಿನಿಲಾಕರ್ ನ್ನು ಮುರಿದು ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಪ್ರಕರಣದ ಜಾಡು ಹಿಡಿದ ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ರವರ ನೇತೃತ್ವದಲ್ಲಿ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ ರವರ ತಂಡ ಆರೋಪಿ ಬಜಪೆಯ ತಾರೀಕಂಬ್ಳ ನಿವಾಸಿ ವಿನ್ಸೆಂಟ್ ಡಿ”ಸೋಜಾರವನ್ನು ಬಜ್ಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ಬಂಧಿಸಿ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
- Advertisement -