Monday, June 8, 2026
Homeತಾಜಾ ಸುದ್ದಿರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ;  ಗೃಹ ಸಚಿವ ಡಾ.ಜಿ ಪರಮೇಶ್ವರ್...

ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ;  ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳವನ್ನು ನಿಷೇಧ ಮಾಡುತ್ತೇವೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಯಾರೂ ಸರಿಯಾಗಿ ಓದಿಲ್ಲ. ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಭಜರಂಗದಳ ನಿಷೇಧ ಮಾಡುತ್ತೇವೆ. ಅಂತಹ ಕೆಲಸ ಮಾಡದೇ ಇದ್ದರೆ ಸುಮ್ಮನೆ ಯಾಕೆ ಬ್ಯಾನ್ ಮಾಡುತ್ತೇವೆ. ನಿಷೇಧ ಮಾಡುವ ಸಂದರ್ಭ ಬರಬಾರದು ಅಂತಾ ಅನಿಸುತ್ತದೆ ಎಂದಿದ್ದಾರೆ.

ನೈತಿಕ ಪೊಲೀಸ್ ಗಿರಿ, ಕೋಮು ಚಟುವಟಿಕೆ ನಾವು ಸಹಿಸುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪಿಎಸ್ ಐ ಹಗರಣದ ಪ್ರಕರಣ ಹೈಕೋರ್ಟ್ ನಲ್ಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!