Friday, August 28, 2026
Homeಕರಾವಳಿಉಡುಪಿಕೊರೋನಾ ಹಿನ್ನೆಲೆ: ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

ಕೊರೋನಾ ಹಿನ್ನೆಲೆ: ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

- Advertisement -
- Advertisement -

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಜುಲೈ 21 ರಂದು ನಡೆಯುವ ಬಕ್ರೀದ್ ಹಬ್ಬದ ವೇಳೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಬ್ರೇಕ್ ಹಾಕಲಾಗಿದೆ. ಈ ಸಂಬಂಧ ಇಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಜುಲೈ 21ರಂದು ಬಕ್ರೀದ್ ಹಬ್ಬದ ದಿನ ಈದ್ಗಾಗಳಲ್ಲಿ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಿದ್ದು, ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಇಚ್ಚಿಸಿದ್ಧಲ್ಲಿ ಸರ್ಕಾರದ ಆದೇಶದನ್ವಯ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಆಯಾ ಮಸೀದಿಗಳಲ್ಲಿ 50 ಜನರು ಮೀರದಂತೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ, ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಅನುಮತಿ ನೀಡಲಾಗಿದೆ.

ರಾಜ್ಯದೆಲ್ಲೆಡೆ ಕೋವಿಡ್-19 ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯತೆಯಿದೆ. ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದಂತೆ ಯಾವುದೇ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಜನರು ಒಟ್ಟು ಗೂಡುವುದನ್ನು ನಿಷೇಧಿಸಲಾಗಿದೆ.

- Advertisement -

Latest News

error: Content is protected !!