Friday, June 5, 2026
Homeಕರಾವಳಿರಂಗಕರ್ಮಿ ಕೆ.ವಿ. ಅಕ್ಷರ ಅವರಿಗೆ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ

ರಂಗಕರ್ಮಿ ಕೆ.ವಿ. ಅಕ್ಷರ ಅವರಿಗೆ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ

- Advertisement -
- Advertisement -

ಪುತ್ತೂರು: ಕಡಲ ತೀರದ ಭಾರ್ಗವ ಡಾ. ಶಿವರಾಮ ಕಾರಂತ ಬಾಲವನ ಸಮಿತಿಯಿಂದ ಇಂದು ಬಾಲವನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುತ್ತೂರಿನ ಪರ್ಲಡ್ಕದಲ್ಲಿರುವ ಬಾಲವನದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ರಂಗ ನಿರ್ದೇಶಕ ಕೆ.ವಿ. ಅಕ್ಷರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ ಡಾ. ಶಿವರಾಮ ಕಾರಂತ ನಾಟ್ಯ ಶಾಲೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಡಾ. ಶಿವರಾಮ ಕಾರಂತರ 121 ನೇ ಜನ್ಮ ಜಯಂತಿ ಅಂಗವಾಗಿ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಮತ್ತು ಬಾಲವನ ಸಮಿತಿ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದವು.

- Advertisement -

Latest News

error: Content is protected !!