Friday, June 5, 2026
Homeಕರಾವಳಿಉಡುಪಿಉಡುಪಿ: ಬಾರ್ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ; Ballal's Caboose ಖ್ಯಾತಿಯ ಅಶ್ವಿನಿ ಶೆಟ್ಟಿ ನಿಧನ

ಉಡುಪಿ: ಬಾರ್ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ; Ballal’s Caboose ಖ್ಯಾತಿಯ ಅಶ್ವಿನಿ ಶೆಟ್ಟಿ ನಿಧನ

- Advertisement -
- Advertisement -

ಉಡುಪಿ; ಸೋಮವಾರ ಬೆಳಗ್ಗಿನ ಜಾವ  ಬಾರ್ ಮಾಲೀಕ ರಮಾನಂದ ಶೆಟ್ಟಿ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ರಮಾನಂದ ಶೆಟ್ಟಿ ಸಾವನ್ನಪ್ಪಿ ಅವರ ಪತ್ನಿ ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ Ballal’s Caboose ಖ್ಯಾತಿಯ ಅಶ್ವಿನಿ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದರು. ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶ್ವಿನಿ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಅಶ್ವಿನಿ ಶೆಟ್ಟಿ ಅವರು ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು. ಬಂಟರ ಸಂಘರಾಗಿದ್ದರು. Ballal’s Caboose ಅನ್ನೋ ಯೂಟ್ಯೂಬ್ ಚಾನೆಲ್ ಮೂಲಕ ತುಳುನಾಡಿನ ಆಚಾರ-ವಿಚಾರಗಳನ್ನು ಬಿಂಬಿಸುವ ವೀಡಿಯೋಗಳನ್ನು ಮಾಡಿ ಸಾಕಷ್ಟು ಉತ್ತಮ ಹೆಸರು ಗಳಿಸಿದ್ದರು.

ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯಲ್ಲಿ ಸೋಮವಾರ ಮುಂಜಾನೆ ವೇಳೆ ಅಗ್ನಿ ಅವಘಡ ಸಂಭವಿಸಿತ್ತು. ಗಾಯಾಳುಗಳಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಂದೆ ತಾಯಿ ಇಬ್ಬರು ಸಾವನ್ನಪ್ಪಿದ್ದರಿಂದ ಇದೀಗ ಮಗ ಹಾಗೂ ಮಗಳು ಅನಾಥರಾಗಿದ್ದಾರೆ.

- Advertisement -

Latest News

error: Content is protected !!