Wednesday, May 15, 2024
Homeಕರಾವಳಿಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧ

ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧ

spot_img
- Advertisement -
- Advertisement -

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಜು.28 ರಂದು ಮತ್ತು 29 ರಂದು ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು, ಜು.28 ಮತ್ತು ಜು. 29 ರಂದು ಎಲ್ಲಾ ಬಾರ್ ಮತ್ತು ವೈನ್ ಶಾಪ್ ಗಳನ್ನು ಬಂದ್ ಮಾಡುವಂತೆ ಅವರು ಆದೇಶ ನೀಡಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಪ್ರಕ್ಷುಬ್ಧವಾಗಿದ್ದು, ಈ ಪ್ರಕ್ಷಬ್ಧ ವಾತಾವರಣವು ಸ್ಥಳೀಯ ಪ್ರದೇಶಗಳಿಗೂ ಪಸರಿಸುವ ಸಂಭವವಿದೆ. ಈ ಸಮಯದಲ್ಲಿ ಮದ್ಯಪಾನ ಸೇವನೆಯ ಮೂಲಕ ಸಾರ್ವಜನಿಕ ಶಾಂತಿ ಭಂಗ ಮತ್ತು ಕಾನೂನು ಸುವ್ಯವಸ್ಥೆಗೆ ತೊಡಕು ಮಾಡುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶಿಸಿದ್ದಾರೆ.

ಇನ್ನು ಪ್ರತಿಯೊಂದು ತಾಲೂಕಿನ ಬಾರ್ ಮತ್ತು ವೈನ್ ಶಾಪ್ ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೋಹರ್(ಸೀಲ್ ಗಳನ್ನು) ಕಡ್ಡಾಯವಾಗಿ ಮಾಡುವಂತೆ ವ್ಯವಸ್ಥೆಗೊಳಿಸಲು ಅವರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!