Monday, June 8, 2026
Homeಪ್ರಮುಖ-ಸುದ್ದಿರಾಹುಲ್ ಗಾಂಧಿಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿಂದ ಜಾಮೀನು

ರಾಹುಲ್ ಗಾಂಧಿಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿಂದ ಜಾಮೀನು

- Advertisement -
- Advertisement -

ಬೆಂಗಳೂರು: ವಿಧಾನಸಭೆ ಚುನಾವಣೆಯ ಸಮಯದಲ್ಲಿ ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಪ್ರಕರಣದಲ್ಲಿ ಸಂಸದ ರಾಹುಲ್ ಗಾಂಧಿಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಜಾಮೀನು ನೀಡಿದೆ.

ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ಹಿನ್ನಲೆಯಲ್ಲಿ ಇಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ಸೂಚಿಸಿತ್ತು.‌

ಈ ಹಿಂದೆ ಎರಡು ಬಾರಿ ಹಾಜರಾತಿಯಿಂದ ವಿನಾಯಿತಿ ಕೋರಿ ಗೈರಾಗಿದ್ದ ರಾಹುಲ್ ಗಾಂಧಿಗೆ ಈ ಬಾರಿ ಹಾಜರಾಗದಿದ್ದರೆ ಜಾಮೀನು ರಹಿತ ವಾರಂಟ್ ಹೊರಡಿಸುವುದಾಗಿ ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದು, ಕೋರ್ಟ್ ಜಾಮೀನು ನೀಡಿದೆ.

ಬೆಳಗ್ಗೆ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿದ ರಾಹುಲ್ ಗಾಂಧಿಗೆ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತ ಕೋರಿದರು.

- Advertisement -

Latest News

error: Content is protected !!