Thursday, June 4, 2026
Homeತಾಜಾ ಸುದ್ದಿಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ವರ್ಗಾವಣೆ : ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ...

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ವರ್ಗಾವಣೆ : ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ಪಂಥ್ ನೇಮಕ

- Advertisement -
- Advertisement -

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ಕಮಲ್ ಪಂಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸಿ.ಎಚ್. ಪ್ರತಾಪ ರೆಡ್ಡಿ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಇನ್ನು ಕೆಎಸ್ ಆರ್ ಪಿ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಅವರನ್ನು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆಗಿ ಆಲೋಕ್ ಕುಮಾರ್ ವರ್ಗಾಯಿಸಲಾಗಿದ್ದು, ಕೆಎಸ್ ಆರ್ ಪಿ ಎಡಿಜಿಪಿಯಾಗಿ ಅಪರಾಧ ಮತ್ತು ತಾಂತ್ರಿಕ ಸೇವೆಗಳ ಎಡಿಜಿಪಿ
ಆರ್. ಹಿತೇಂದ್ರ ಅವರಿಗೆಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.‌

ಸಿಐಡಿ ಎಸ್ಪಿ ಆಗಿ ಎಂ.ಎನ್. ಅನುಚೇತ್ ವರ್ಗಾವಣೆ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆ ಪ್ರಗತಿಯಲ್ಲಿರುವ ಬೆನ್ನಲ್ಲೇ ನೇಮಕಾತಿ ವಿಭಾಗದ ಡಿಜಿಪಿಯಾಗಿ ಕಮಲ್ ಪಂಥ್ ನೇಮಕ ಮಹತ್ವ ಪಡೆದಿದೆ.

ಪಿಎಸ್ ಐ ನೇಮಕಾತಿ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ ನೇಮಕಾತಿ ವಿಭಾಗದ ಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿತ್ತು.

- Advertisement -

Latest News

error: Content is protected !!