- Advertisement -
- Advertisement -
ಬೆಂಗಳೂರಿನಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಆಸ್ಪತ್ರೆ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. 466 ನೇ ಕೋರೋನಾ ಶಂಕಿತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದು ಆಸ್ಪತ್ರೆ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಆಸ್ಪತ್ರೆಯ ಟ್ರಾಮಾ ಕೇರ್ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾನೆ. 50 ವರ್ಷದ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಕಟ್ಟಡದಿಂದ ಹೇಗೆ ಕೆಳಗಡೆ ಬಿದ್ದರು ಎಂಬುದು ನಿಗೂಢವಾಗಿದೆ. ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ದೌಡಾಯಿಸಿದ್ದಾರೆ. ತಪ್ಪಿಸಿಕೊಳ್ಳುವ ಧಾವಂತದಲ್ಲಿ ಅವರು ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Advertisement -