Wednesday, June 3, 2026
Homeಕರಾವಳಿಬೆಳ್ತಂಗಡಿ : ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ಕೊಕ್ಕಡ ಗ್ರಾಮದ ಸೌತಡ್ಕ ಸಮೀಪದ  ಗೇರು ಹಾಡಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ.29 ರಂದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಂಗಪ್ಪ (64) ಎಂದು ಗುರುತಿಸಲಾಗಿದೆ.

ಇವರು ಸುಮಾರು 2-3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸಿದ್ದಾರೆ.

ಸೌತಡ್ಕ ಸಮೀಪದ ಗೇರು ಹಾಡಿಯಲ್ಲಿ  ವ್ಯಕ್ತಿ ಓರ್ವ ನೇಣು ಹಾಕಿಕೊಂಡಿರುವ ಬಗ್ಗೆ ಸ್ಥಳೀಯರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದಾಗ, ವ್ಯಕ್ತಿ ಧರಿಸಿಕೊಂಡಿದ್ದ ಅಂಗಿಯಲ್ಲಿ ಎಟಿಎಂ ಕಾರ್ಡ್ ದೊರಕಿತ್ತು. ಆ ಮೂಲಕ ಅವರ ಹೆಸರು ಮತ್ತು ವಿಳಾಸವನ್ನು ಪತ್ತೆ ಹಚ್ಚಲಾಯಿತು. ಧರ್ಮಸ್ಥಳ ಪೊಲೀಸರು ಪರಿಶೀಲಿಸಿದಾಗ ಈತ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿರುವ ಬಗ್ಗೆ ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಆತನ ಕುಟುಂಬಸ್ಥರು ಮೇ.27ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದರು . ಇದೀಗ ನಿಂಗಪ್ಪ ಕುಟುಂಬಸ್ಥರಿಗೆ ಈತ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ನಿಂಗಪ್ಪ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ  ಕೆ.ಎಸ್.ಹೆಗ್ಡೆ  ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!