Thursday, June 4, 2026
Homeತಾಜಾ ಸುದ್ದಿನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ; ಇನ್ನೊಂದು ಫೋಟೋ ಸಿಕ್ಕಿದೆ...

ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ; ಇನ್ನೊಂದು ಫೋಟೋ ಸಿಕ್ಕಿದೆ ಎಂದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

- Advertisement -
- Advertisement -

ಬೆಂಗಳೂರು: ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ಪೋಟೋ ಹಾಗೂ ವೀಡಿಯೋ ವೈರಲ್ ಆಗಿತ್ತು. ಘಟನೆ ಬಯಲಾಗುತ್ತಿದ್ದಂತೆ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ  ನಟ ದರ್ಶನ್ ಗೆ ರಾಜಾತಿಥ್ಯದ ಮತ್ತೊಂದು ಪೋಟೋ ಸಿಕ್ಕಿರುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದ ಸಂಬಂಧ ಮತ್ತೊಂದು ಪೋಟೋ ಸಿಕ್ಕಿದೆ ಎಂದಿದ್ದಾರೆ.ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಸಂಬಂಧ ಈಗಾಗಲೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎರಡು ಕೇಸ್ ದಾಖಲಾಗಿದೆ. ಇದಲ್ಲದೇ ಜೈಲು ಅಧಿಕಾರಿಗಳ ವಿರುದ್ಧವೂ ಒಂದು ಕೇಸ್ ದಾಖಲಾಗಿದೆ. ಈ ಮೂರು ಪ್ರಕರಣಗಳ ತನಿಖೆಯನ್ನು ನ್ಯಾಯಾಲಯದ ಅನುಮತಿ ಪಡೆದು ಹಿರಿಯ ಅಧಿಕಾರಿಗಳಿಂದ ನಡೆಸಲಾಗುತ್ತಿದೆ ಎಂದಿದ್ದಾರೆ.

- Advertisement -

Latest News

error: Content is protected !!