Monday, October 12, 2026
Homeಕರಾವಳಿಮಂಗಳೂರುಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆ ನೀಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆ ನೀಡಿದ್ದ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು, ಜು. 4: ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ವಂಚನೆಯ ಹಣದ ವಹಿವಾಟಿಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಸಹಕರಿಸುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ.104/2025 ಪ್ರಕರಣದಡಿ (ಐಟಿ ಕಾಯ್ದೆ 66(C), 66(D) ಹಾಗೂ ಭಾರತೀಯ ನ್ಯಾಯ ಸಂಹಿತೆಯ ಕಲಂ 126(2), 308(6), 318(4), 319(2), 3(5)) ಆರೋಪಿಯನ್ನು ಜುಲೈ 3ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವಿಚಾರಣೆಯ ವೇಳೆ ಆರೋಪಿಯ ವಿರುದ್ಧ ಪ್ರಕರಣ ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿರುವ ಬಗ್ಗೆ ಹಾಗೂ ಆರೋಪಿಯು ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ದಸ್ತಗಿರಿಗೆ ಸಿಗದೇ ತಲೆ ಮರೆಸಿಕೊಂಡಿರುವುದು ತಿಳಿದುಬಂದಿರುತ್ತದೆ

- Advertisement -

Latest News

error: Content is protected !!