Thursday, June 4, 2026
Homeಉತ್ತರ ಕನ್ನಡಒಂದೂವರೆ ಕೋಟಿ ಹಣ ದುರುಪಯೋಗಪಡಿಸಿಕೊಂಡು ಮಂಗಳೂರು ಮೂಲದ ಬ್ಯಾಂಕ್ ಮ್ಯಾನೇಜರ್ ಪರಾರಿ

ಒಂದೂವರೆ ಕೋಟಿ ಹಣ ದುರುಪಯೋಗಪಡಿಸಿಕೊಂಡು ಮಂಗಳೂರು ಮೂಲದ ಬ್ಯಾಂಕ್ ಮ್ಯಾನೇಜರ್ ಪರಾರಿ

- Advertisement -
- Advertisement -

ಭಟ್ಕಳ: ಒಂದೂವರೆ ಕೋಟಿ ರೂಪಾಯಿ ಹಣ ದುರುಪಯೋಗಪಡಿಸಿಕೊಂಡು ಬ್ಯಾಂಕ್ ಮ್ಯಾನೇಜರ್ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳ ನಗರ ಭಾಗದ ನ್ಯೂ ಇಂಗ್ಲೀಷ್ ಸ್ಕೂಲ್ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಘಟನೆ ನಡೆದಿದೆ.

ಬ್ಯಾಂಕ್ ಮ್ಯಾನೇಜರ್ ಅನೂಪ್ ಪೈ ಹಣ ದುರುಪಯೋಗಪಡಿಸಿಕೊಂಡಿದ್ದು ಮೂಲತಃ ಮಂಗಳೂರಿನ ಕಾವೂರು ಬೋಳಪು ಗುಡ್ಡೆ ನಿವಾಸಿ ಎಂದು ಹೇಳಲಾಗಿದೆ. ಬ್ಯಾಂಕ್ ಗ್ರಾಹಕರೊಂದಿಗೆ ಒಳ ಸಂಚು ಮಾಡಿ ಬ್ಯಾಂಕಿನ ಸಿಸ್ಟಮ್ ಸಸ್ಪೆನ್ ಖಾತೆಗೆ ಖರ್ಚು ಹಾಕಿ ಗ್ರಾಹಕರ ಖಾತೆಗೆ ಹಣ ಜಮಾ ಮಾಡಿರುವ ಆರೋಪ ಬ್ಯಾಂಕ್ ಮ್ಯಾನೇಜರ್ ಮೇಲೆ ವ್ಯಕ್ಯವಾಗಿದೆ.

ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!