Thursday, June 4, 2026
Homeಉತ್ತರ ಕನ್ನಡಕಾರವಾರ ; ಹೆಂಡತಿ ಖಾತೆಗೆ 2.69 ಕೋಟಿ ರೂಪಾಯಿ ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದ  ಅಸಿಸ್ಟೆಂಟ್ ಮ್ಯಾನೇಜರ್...

ಕಾರವಾರ ; ಹೆಂಡತಿ ಖಾತೆಗೆ 2.69 ಕೋಟಿ ರೂಪಾಯಿ ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದ  ಅಸಿಸ್ಟೆಂಟ್ ಮ್ಯಾನೇಜರ್ ಬಂಧನ

- Advertisement -
- Advertisement -

ಕಾರವಾರ: ಹೆಂಡತಿ ಖಾತೆಗೆ 2.69 ಕೋಟಿ ರೂ. ವರ್ಗಾಯಿಸಿ ನಾಪತ್ತೆಯಾಗಿದ್ದ ಉತ್ತರಕನ್ನಡದ ಯಲ್ಲಾಪುರ ಬ್ಯಾಂಕ್ ಆಫ್ ಬರೋಡಾ ಶಾಖೆಯ ಅಸಿಸ್ಟೆಂಟ್ ಮ್ಯಾನೇಜರ್ ನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಮೂಲದ ಕುಮಾರ್ ಬೋನಾಲ್ ನನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಲ್ಲಾಪುರ  ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನಾಗಿದ್ದ ಈತ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂ.ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿ ಪರಾರಿಯಾಗಿದ್ದ. ಇದಲ್ಲದೇ ಹೆಂಡತಿ ಖಾತೆಯಿಂದ ಕೂಡ ಆತ ಹಣವನ್ನು ಸಂಪೂರ್ಣವಾಗಿ ಕ್ಲೀನ್‌ ಮಾಡಿದ್ದ ಎನ್ನಲಾಗಿದೆ. ಈ ನಡುವೆ ಪ್ರಕರಣ ಸಂಬಂಧ ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ಪೊಲೀಸ್ ದೂರು ನೀಡಿದ್ದು, ಪ್ರಕರಣ ದಾಖಲಸಿಕೊಂಡ ಪೋಲಿಸರು, ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಪೋಲಿಸರ ಬಳಿ, ಹಣವನ್ನು ಆನ್​ಲೈನ್ ಗೇಮ್​​ನಲ್ಲಿ ಕಳೆದುಕೊಂಡಿರುವುದಾಗಿ ಹೇಳಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!