Thursday, June 4, 2026
Homeಕರಾವಳಿ'ಕೆಲಸದ ಒತ್ತಡ'ದಿಂದ ಮನನೊಂದು ಬ್ಯಾಂಕ್ ನಲ್ಲೆ ನೇಣಿಗೆ ಶರಣಾದ ಕೆನರಾ ಬ್ಯಾಂಕ್ ಮ್ಯಾನೇಜರ್

‘ಕೆಲಸದ ಒತ್ತಡ’ದಿಂದ ಮನನೊಂದು ಬ್ಯಾಂಕ್ ನಲ್ಲೆ ನೇಣಿಗೆ ಶರಣಾದ ಕೆನರಾ ಬ್ಯಾಂಕ್ ಮ್ಯಾನೇಜರ್

- Advertisement -
- Advertisement -

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಕುತ್ತುಪರಂಬದಲ್ಲಿ ‘ಕೆಲಸದ ಒತ್ತಡ’ದಿಂದ ನೊಂದ ಮಹಿಳಾ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಕೆನರಾ ಬ್ಯಾಂಕಿನ ತೊಕ್ಕಿಲಂಗಡಿ ಶಾಖೆಯ ವ್ಯವಸ್ಥಾಪಕ ಕೆ ಸ್ವಪ್ನಾ(38) ಅವರು ಇಂದು ಬೆಳಗ್ಗೆ 9 ಗಂಟೆಗೆ ಬ್ಯಾಂಕ್ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ಬಂದ ಮಹಿಳಾ ಉದ್ಯೋಗಿಯೊಬ್ಬರು ತಮ್ಮ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿ ಅಲಾರಾಂ ಒತ್ತಿದ್ದಾರೆ. ತಕ್ಷಣ ಸ್ಥಳೀಯ ಜನರ ಸಹಾಯದಿಂದ ಬ್ಯಾಂಕ್ ಸಿಬ್ಬಂದಿ ಸ್ವಪ್ನಾ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮ್ಯಾನೇಜರ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಪೊಲೀಸರು ಸ್ವಪ್ನಾ ಅವರ ಡೈರಿಯನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಅವರು ಕೆಲಸದ ಒತ್ತಡ ತಡೆದುಕೊಳ್ಳಲು ಸಾಧ್ಯವಾಗದೆ ಇಂತಹ ಕಠಿಣ ನಿರ್ಧಾರ ತೆಗೆದುಕೊಂಡಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಪ್ನಾ ಅವರನ್ನು ಸೆಪ್ಟೆಂಬರ್ 2020ರಲ್ಲಿ ತೊಕ್ಕಿಲಂಗಡಿ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ಅವರು ಕಣ್ಣೂರಿನ ನಿರ್ಮಲಗಿರಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದೊಂದಿಗೆ ವಾಸಿಸುತ್ತಿದ್ದರು.

- Advertisement -

Latest News

error: Content is protected !!