Saturday, June 6, 2026
Homeಕರಾವಳಿಮಂಗಳೂರು: ವಾಮಂಜೂರಿನಲ್ಲಿ ಶಾರದೋತ್ಸವ ಕಾರ್ಯಕ್ರಮಕ್ಕೆ ಶುಭ ಕೋರಲು ಹಾಕಿದ್ದ ಬ್ಯಾನರ್ ಹರಿದ ಪ್ರಕರಣ; ಮೂವರು ಆರೋಪಿಗಳನ್ನು...

ಮಂಗಳೂರು: ವಾಮಂಜೂರಿನಲ್ಲಿ ಶಾರದೋತ್ಸವ ಕಾರ್ಯಕ್ರಮಕ್ಕೆ ಶುಭ ಕೋರಲು ಹಾಕಿದ್ದ ಬ್ಯಾನರ್ ಹರಿದ ಪ್ರಕರಣ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು : ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವ ಕಾರ್ಯಕ್ರಮಕ್ಕೆ ಶುಭಕೋರಲು  ಹಾಕಿದ ವಾಮಂಜೂರು ಫ್ರೆಂಡ್ಸ್ ಸಂಘಟನೆಯು ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಠಾಣಾ ಪೋಲಿಸರು ಬಂಧಿಸಿದ್ದಾರೆ. ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಬಂಧಿತ ಆರೋಪಿಗಳು.

ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾನರ್ ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಕೃತ್ಯವನ್ನು ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅದರಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!