- Advertisement -
- Advertisement -
ಬಂಟ್ವಾಳ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಮಧ್ಯವಯಸ್ಕ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ.
೧೬ ವರ್ಷದ ಅಪ್ರಾಪ್ತ ಬಾಲಕಿಯು ಬಸ್ಸಿನಲ್ಲಿ ಸಂಚರಿಸುವಾಗ ಈತ ಪ್ರತಿನಿತ್ಯ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಆಗಸ್ಟ್ ೧೯ರಂದು ಸಂಜೆ ಕಲ್ಲಡ್ಕ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಮತ್ತೆ ಸಂಶಯಾಸ್ಪದವಾಗಿ ಗಮನಿಸುತ್ತಿದ್ದಾಗ, ಭಯಗೊಂಡ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ತಾಯಿ ಹಾಗೂ ಅವರ ಕಚೇರಿ ಮಾಲೀಕರು ಸ್ಥಳಕ್ಕೆ ಬಂದು ವಿಚಾರಿಸಿದಾಗ ಆರೋಪಿಯು ತನ್ನ ಹೆಸರು ತಿಳಿಸಿ ಕಾಲ್ಕಿತ್ತಿದ್ದ.
ಬಾಲಕಿಯ ತಾಯಿ ನೀಡಿದ ದೂರಿನನ್ವಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆ ಹಾಗೂ ಬಿಎನ್‌ಎಸ್ (BNS) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಜಯಂತ್‌ನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -


