Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ; ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆ;...

ಬಂಟ್ವಾಳ; ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆ; ಸ್ಪೀಕರ್ ಯು ಟಿ ಖಾದರ್ ತನಿಖೆಗೆ ಸೂಚನೆ

- Advertisement -
- Advertisement -

ಬಂಟ್ವಾಳ; ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು ಸ್ಪೀಕರ್ ಯು ಟಿ ಖಾದರ್ ತನಿಖೆಗೆ ಸೂಚನೆ ನೀಡಿದ್ದಾರೆ.

ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿರುವುದು ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳೆಂದು ಸ್ಥಳೀಯರು ತಿಳಿಸಿದ್ದಾರೆ. ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್‌ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಅವರು ಮಾಹಿತಿ ನೀಡಿದ್ದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್‌ಗಳು ನದಿ ಬದಿಯಲ್ಲಿ ಚದುರಿ ಬಿದ್ದಿದ್ದವು.‌ ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಪ್ರತಿಕ್ರಿಯಿಸಿ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ನದಿಗೆ ತಲುಪಿದ್ದು ಹೇಗೆ ಎನ್ನುವುದು ಅಚ್ಚರಿಯಾಗಿದೆ. ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಆಧಾರ್ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್‌ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದಿದ್ದಾರೆ.


ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್​ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಬಳಿಕ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್​ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.

- Advertisement -

Latest News

error: Content is protected !!