- Advertisement -


- Advertisement -
ಬಂಟ್ವಾಳ: ಮನೆಯ ಲಾಕರ್ ಮುರಿದು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ಬಂಟ್ವಾಳ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಪಾ (21) ಶರಣಾದ ಆರೋಪಿ. ಕಳೆದ ಫೆಬ್ರವರಿ 4ರಂದು ಸಂಜೆ ಮನೆ ಮಾಲೀಕರು ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಹಿಂತಿರುಗಿ ಬಂದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿದ್ದು, ಕೊಠಡಿಯ ಲಾಕರ್ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5,000 ರೂ. ನಗದು ಕಳವಾಗಿತ್ತು.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳ ಪೈಕಿ ಮೊಹಮ್ಮದ್ ಮಿಸ್ಪಾ ನ. 11ರಂದು ನ್ಯಾಯಾಲಯಕ್ಕೆ ಶರಣಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಆತನನ್ನು ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
- Advertisement -


