Friday, November 27, 2026
Homeಕರಾವಳಿಬಂಟ್ವಾಳ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆ

ಬಂಟ್ವಾಳ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆ

- Advertisement -
- Advertisement -

ಬಂಟ್ವಾಳ ವಕೀಲರ ಸಂಘದ ಆಶ್ರಯದಲ್ಲಿ ಗುರುವಾರ ಮಧ್ಯಾಹ್ನ ಸಂಘದ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಳ್ತಂಗಡಿಯ ಹಿರಿಯ ವಕೀಲ ಧನಂಜಯ್ ಬಿ.ಕೆ. ಅವರು ಭಾರತದ ಸಂವಿಧಾನದ ರಚನೆಯ ಇತಿಹಾಸ ಹಾಗೂ ಸಂವಿಧಾನ ರಚನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆನಗಲ್ ನರಸಿಂಹ ರಾವ್ ಅವರ ಮಹತ್ವದ ಕೊಡುಗೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹಾಗೂ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ವಹಿಸಿದ್ದರು.

ವೇದಿಕೆಯಲ್ಲಿ ಬಂಟ್ವಾಳದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶೆ ಸೌಂದರ್ಯ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ ಹಾಗೂ ಬಂಟ್ವಾಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ನರೇಂದ್ರನಾಥ ಭಂಡಾರಿ ಉಪಸ್ಥಿತರಿದ್ದರು.

ವಕೀಲರಾದ ಕೀರ್ತನ ಸ್ವಾಗತಿಸಿದರು. ಜಯಶ್ರೀ ವಂದಿಸಿದರು. ಆಶಾ ಕಾರ್ಯಕ್ರಮ ನಿರೂಪಿಸಿದರು. ಸಂಘದ ಹಿರಿಯ ಹಾಗೂ ಕಿರಿಯ ವಕೀಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!