Saturday, April 27, 2024
Homeಅಪರಾಧಬಂಟ್ವಾಳ: ಕರಿಮಣಿ ಸರ ಸುಲಿಗೆ ಪ್ರಕರಣ; ಇಬ್ಬರ ಬಂಧನ

ಬಂಟ್ವಾಳ: ಕರಿಮಣಿ ಸರ ಸುಲಿಗೆ ಪ್ರಕರಣ; ಇಬ್ಬರ ಬಂಧನ

spot_img
- Advertisement -
- Advertisement -

ಬಂಟ್ವಾಳ: ಸೆಪ್ಟೆಂಬರ್ 8 ರಂದು ಪಣೋಲಿಬೈಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯೊಬ್ಬರ ಬಳಿ ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಬಲವಂತವಾಗಿ ಕರಿಮಣಿಸರವನ್ನು ಕಿತ್ತು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಟ್ವಾಳ ಡಿವೈಎಸ್ಪಿ ತಂಡ ಮತ್ತು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ಆರ್ಯಾಪು ಗ್ರಾಮದ ರೋಹಿತ್(22) ಮತ್ತು ಲೋಹಿತ್ (20) ಬಂಧಿತ ಆರೋಪಿಗಳು. ಸೆ.8 ರ ಮಧ್ಯಾಹ್ನದಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆ ವತ್ಸಲಾ (53)ರವರ ಕುತ್ತಿಗೆಯಿಂದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿದ್ದರು.

ಆರೋಪಿಗಳಿಂದ ಮಾಂಗಲ್ಯ ಸರವನ್ನು ಹಾಗೂ ಸುಲಿಗೆ ಮಾಡಲು ಉಪಯೋಗಿಸಿದ ಅಪಾಚಿ ಬೈಕ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1.35 ಲಕ್ಷ ಆಗಿರುತ್ತದೆ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಪತ್ತೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಷ್ ಭಗವಾನ್ ಸೋನಾವಣೆ ನಿರ್ದೇಶನದಂತೆ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಗುಣಾರೆ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೈಂಟೈನ್ ಡಿಸೋಜಾ ನೇತ್ರತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್, ಬಂಟ್ವಾಳ ನಗರ ಠಾಣಾ ಪಿ.ಎಸ್.ಐ ಅವಿನಾಶ್ ಗೌಡ, ಅಪರಾಧ ಪತ್ತೆ ವಿಭಾಗದ ಪಿ.ಎಸ್.ಐ ಕಲೈಮಾರ್, ಬಂಟ್ವಾಳ ಡಿ.ವೈ.ಎಸ್.ಪಿ ತಂಡದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್, ಕುಮಾರ್ ಎಚ್.ಕೆ, ಹಾಗೂ ಬಂಟ್ವಾಳ ನಗರ ಠಾಣಾ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಕೃಷ್ಣ ಕುಲಾಲ್ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಜಯಗಣೇಶ್ ಭಾಗವಹಿಸಿರುತ್ತಾರೆ. ಅತೀ ಶೀಘ್ರವಾಗಿ ಈ ಕ್ಲಿಷ್ಟಕರವಾದ ಪ್ರಕರಣವನ್ನು ಭೇದಿಸಿದ ತಂಡವನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದಾರೆ.

- Advertisement -
spot_img

Latest News

error: Content is protected !!