Tuesday, July 7, 2026
Homeಕರಾವಳಿದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು...

ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದ ಬಂಟ್ವಾಳ ನ್ಯಾಯಾಲಯ

- Advertisement -
- Advertisement -

ಬೆಳ್ತಂಗಡಿ : ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಜಾರಿ ಯಾಗಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಬಂಟ್ವಾಳ ನ್ಯಾಯಾಲಯ ಆದೇಶ ಹೊರಡಿಸಿದೆ.

ದ್ವೇಷ ಭಾಷಣ ಮಾಡಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಮಹೇಶ್ ಶೆಟ್ಟಿ ಅವರ ವಿರುದ್ದ ವಾರೆಂಟ್ ಜಾರಿ ಮಾಡಿತ್ತು. ಫೆ.2 ರಂದು ಬಂಟ್ವಾಳ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿದ್ದ  ಜಾಮೀನು ಅರ್ಜಿಯ  ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಪರವಾಗಿ ನ್ಯಾಯವಾದ ಸಿರಾಜುದ್ದೀನ್ ಜೋಗಿಬೆಟ್ಟು ವಾದ ಮಂಡಿಸಿದ್ದರು.

- Advertisement -

Latest News

error: Content is protected !!