Saturday, June 6, 2026
Homeಕರಾವಳಿಬಂಟ್ವಾಳ: ಕೊರೋನಾ ಪಾಸಿಟಿವ್ ಆಗಿದ್ದರೂ ಮದುವೆಯಲ್ಲಿ ಭಾಗಿ, ಕೇಸು ದಾಖಲು

ಬಂಟ್ವಾಳ: ಕೊರೋನಾ ಪಾಸಿಟಿವ್ ಆಗಿದ್ದರೂ ಮದುವೆಯಲ್ಲಿ ಭಾಗಿ, ಕೇಸು ದಾಖಲು

- Advertisement -
- Advertisement -

ಬಂಟ್ವಾಳ: ಕೊರೋನಾ ಪಾಸಿಟಿವ್ ಎಂದು ವರದಿ ಬಂದಿದ್ದರೂ, ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರುವ ಮಣಿನಾಲ್ಕೂರು ಮೂಲದ ನಿವಾಸಿ ಒಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ ರಾಜೇಶ್ ಪೂಜಾರಿ ಅವರು ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪಿ. ಅವರಿಗೆ ಮೇ 10ರಂದು ಸೋಂಕು ದೃಢಪಟ್ಟಿದ್ದು, ಆದರೆ ಅವರು ನಿನ್ನೆ (ಗುರುವಾರ) ಕಾರ್ಕಳದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು.

ಗ್ರಾ.ಪಂ.ಪಿಡಿಒ ಅವರ ತಂಡ ಮನೆಗೆ ಭೇಟಿಯಾದಾಗ ಅವರು ಮನೆಯಲ್ಲಿರಲಿಲ್ಲ. ಈ ಹಿನ್ನೆಲೆಯಲ್ಲಿ ಪಿಡಿಒ ವಸಂತಿ ಅವರು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!