Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ; ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

ಬಂಟ್ವಾಳ; ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

- Advertisement -
- Advertisement -

ಬಂಟ್ವಾಳ; ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಗಣೇಶ ಕೋಡಿ ಎಂಬಲ್ಲಿ ನಡೆದಿದೆ.

ರಾಜೇಶ್ವರಿ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದಾಗ ಘಟನೆ ನಡೆದಿದ್ದು, ಟಿವಿ,ಪ್ರಿಡ್ಜ್ ಸೇರಿದಂತೆ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ. ಮನೆ ಮಾಲಕಿ ರಾಜೇಶ್ವರಿ ಮನೆಗೆ ಬಾಗಿಲು ಹಾಕಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮನೆ ಛಾವಣಿಯಿಂದ ಹೊಗೆಯಾಡುತ್ತಿರುವುದನ್ನು ಗಮನಿಸಿ ಬಾಗಿಲು ಮುರಿದು ನೋಡಿದಾಗ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.


ಮನೆಯ ಕಾಗದಪತ್ರಗಳೂ ಮನೆಯಲ್ಲಿದ್ದ ಮಕ್ಕಳ ಶಾಲೆಯ ಪುಸ್ತಕ, ಬಟ್ಟೆ ಬರೆ ಎಲ್ಲವೂ ಬೆಂಕಿಗಾಹುತಿಯಾಗಿದ್ದು, ಹಾಕಲು ಬಟ್ಟೆ ಬರೆ ಇಲ್ಲದಂತಹ ಸ್ಥಿತಿಗೆ ಬಡ ಕುಟುಂಬ ತಲುಪಿದೆ.

- Advertisement -

Latest News

error: Content is protected !!