Thursday, June 4, 2026
Homeಕರಾವಳಿಬಂಟ್ವಾಳ: ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬಂಟ್ವಾಳ: ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಕಾವಳಪಡೂರು: ಗ್ಯಾಸ್ ಏಜೆನ್ಸಿಯೊಂದರ ಡೆಲಿವರಿ ಸಿಬಂದಿಯೋರ್ವ ಡೆಲಿವೆರಿ ಮಾಡಬೇಕಿದ್ದ ಗ್ಯಾಸ್ ಸಿಲಿಂಡರ್ ನಿಂದ ಅಡುಗೆ ಅನಿಲವನ್ನು ಖಾಲಿ ಸಿಲಿಂಡರಿಗೆ ತುಂಬಿಸಿ ಮಾರಾಟ ಮಾಡುತ್ತಿದ್ದದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ: ಕಾವಳಪಡೂರು ಗ್ರಾಮದ ಅಲಂಪುರಿಯಲ್ಲಿ ನಡೆದಿದೆ.

ಕೃತ್ಯ ನಡೆಸುತ್ತಿದ್ದ ಆರೋಪಿ ಉತ್ತರ ಭಾರತ ಮೂಲದ ಕಾರ್ಮಿಕ ಜಯಪ್ರಕಾಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.

ಖಾಲಿ ಸಿಲಿಂಡರಿಗೆ ಗ್ಯಾಸ್ ತುಂಬಿಸಿ ಮಾರಾಟ ಮಾಡುವ ಕುರಿತು ಸಂಶಯಗೊಂಡ ಗ್ರಾಮಸ್ಥರು ಕಾದು ಕುಳಿತು ಪತ್ತೆ ಹಚ್ಚಿದ್ದಾರೆ. ಆರೋಪಿಗಳು ಅಲಂಪುರಿಯ ಗುಡ್ಡ ಪ್ರದೇಶದಲ್ಲಿ ಈ ಕೃತ್ಯ ನಡೆಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!