Sunday, June 7, 2026
Homeಅಪರಾಧಬಂಟ್ವಾಳ: ಅಪ್ರಾಪ್ತೆಗೆ ಅತ್ಯಾಚಾರ ಎಸಗಿ ವಿದೇಶಕ್ಕೆ ಪರಾರಿಯಾದ ಆರೋಪಿ

ಬಂಟ್ವಾಳ: ಅಪ್ರಾಪ್ತೆಗೆ ಅತ್ಯಾಚಾರ ಎಸಗಿ ವಿದೇಶಕ್ಕೆ ಪರಾರಿಯಾದ ಆರೋಪಿ

- Advertisement -
- Advertisement -

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬಲವಂತದಿಂದ ಲೈಂಗಿಕ ಸಂಬಂಧ ಬೆಳೆಸಿ ನಂತರ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ

ಏನಿದು ಪ್ರಕರಣ?
ಆರೋಪಿ ಮಸೂದ್ ಗೆ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂ ನಲ್ಲಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿ ಪರಿಚಯವಾಗಿದ್ದು, ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ಆ ಬಳಿಕ ನಾಪತ್ತೆಯಾಗಿದ್ದಾನೆ. ಸಂತ್ರಸ್ತ ಬಾಲಕಿ ಇದೀಗ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು ಘಟನೆ ಬೆಳಕಿಗೆ ಬಂದಿದೆ.

ಇದೀಗ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಬಂಟ್ವಾಳ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!