Wednesday, June 24, 2026
Homeಕರಾವಳಿಕೋವಿಡ್ ಲಸಿಕೆ ಪಡೆದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಕೋವಿಡ್ ಲಸಿಕೆ ಪಡೆದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

- Advertisement -
- Advertisement -

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.

ಲಸಿಕೆ ಪಡೆದ ಬಳಿಕ ಮಾತನಾಡಿದ ಶಾಸಕರು, ತಾನು ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡಿದ್ದೇನೆ. 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಕಾಯಿಲೆಯಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟಂತಹ ಬಂಟ್ವಾಳದ ಜನತೆಯಲ್ಲಿ ಕೋವಿಡ್ ಲಸಿಕೆ ಪಡೆಯುವಂತೆ ಮನವಿ ಮಾಡುತ್ತಿದ್ದೇನೆ ಎಂದ್ರು. ಇದರಿಂದ ತಮಗೆ ಹಾಗೂ ಸಮಾಜಕ್ಕೆ ಒಳಿತಾಗುತ್ತದೆ. ಕೊರೊನಾದ 2ನೇ ಅಲೆಯ ಕುರಿತು ಜನತೆ ಆತಂಕದಲ್ಲಿದ್ದು, ಹೀಗಾಗಿ ತಮ್ಮ ಹಾಗೂ ಇತರರ ರಕ್ಷಣೆಯ ದೃಷ್ಟಿಯಿಂದ ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ವಿತರಣೆಯಾಗುತ್ತಿದ್ದು, ಜನತೆ ಇದರ ಪ್ರಯೋಜನ ಪಡೆಯಬೇಕಿದೆ ಎಂದರು.

ಶಾಸಕರ ಜೊತೆ ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಅವರು ಕೂಡ ಲಸಿಕೆ ಪಡೆದುಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳು ಜತೆಗಿದ್ದರು.

- Advertisement -

Latest News

error: Content is protected !!