
ಬಂಟ್ವಾಳ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಟಿಪಳ್ಳ ಸುರತ್ಕಲ್ ನಿವಾಸಿ ಮೊಹಮ್ಮದ್ ಆಯುಬ್ ಎಂಬವರ ಮಗ ಮೊಹಮ್ಮದ್ ಫರಾಜ್ ಬಂಧಿತ ಆರೋಪಿ.
ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯ ಅ.ಕ್ರ : 98/2023 ಸಂಬಂಧಿಸಿದಂತೆ ACJ & JMFC ನ್ಯಾಯಾಲಯ ಬಂಟ್ವಾಳದ C.c no 440/2024 ರಲ್ಲಿ ತಲೆಮಾರಿಸಿಕೊಂಡಿದ್ದ ವಾರೆಂಟ್ ಆರೋಪಿಯಾಗಿದ್ದ.
ಬಂಟ್ವಾಳ ನಗರ ಪೊಲೀಸ್ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಠಾಣಾ Asi ಸುಜು, CHC 665 ಜಗದೀಶ ಮತ್ತು Pc 2511 ಮಂಜುನಾಥ ರವರು ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಬಳಿಕ Pc 2471 ವಿಜಯ, PC 611 ರಂಜಿತ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಈತನ ಮೇಲೆ ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ, ಬಜ್ಪೆ ಪೊಲೀಸ್ ಠಾಣೆ ಮತ್ತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


